ಬಳ್ಳಾರಿ :
ಗ್ರಾಮ ಪಂಚಾಯತಿ ಚುನಾವಣೆಯ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದ್ದು, ಗ್ರಾ.ಪಂ. ಚುನಾವಣೆಯಲ್ಲಿ ಮಂಗಳಮುಖಿಯೊಬ್ಬರು ಗೆಲುವು ಸಾಧಿಸಿದ್ದಾರೆ.
ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಲ್ಲಹಳ್ಳಿ ಗ್ರಾ.ಪಂ. ವ್ಯಾಪ್ತಿಯ ರಾಜಾಪುರದ ಮತ ಕ್ಷೇತ್ರದಿಂದ ಮಂಗಳಮುಖಿ ಸುಧಾ 622 ಮತಗಳನ್ನು ಪಡೆಯುವ ಮೂಲಕ ಗೆಲುವು ಪಡೆದಿದ್ದಾರೆ.
ಈ ಗ್ರಾಮ ಪಂಚಾಯತಿ ರಚನೆಯಾಗಿ 26 ವರ್ಷಗಳ ನಂತರ ಚುನಾವಣೆ ನಡೆದಿತ್ತು. ಕಳೆದ 26 ವರ್ಷಗಳಿಂದ ಇಲ್ಲಿ ಅವಿರೋಧ ಆಯ್ಕೆ ನಡೆಯುತ್ತಿತ್ತು. 26 ವರ್ಷಗಳ ನಂತರ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಗೆಲುವು ಗಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ