ಶ್ರೀಗಳ ಆರೋಗ್ಯ ಸ್ಥಿತಿ ಚಿಂತಾಜನಕ!!!

ತುಮಕೂರು:

     ಸಿದ್ಧಗಂಗಾ ಶ್ರೀಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಕೆಲವು ಮೂಲಗಳು ತಿಳಿಸಿದ್ದು, ಮಠಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ.

      ಇಂದು ಸಿದ್ದಗಂಗಾ ಮಠದ ಆವರಣದಲ್ಲಿ ಗೃಹಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ನಡೆದಾಡುವ ದೇವರ ಆರೋಗ್ಯ ಗಂಭೀರವಾಗಿದೆ. ಅವರಲ್ಲಿರುವಂಥ ಪ್ಯಾರಾಮೀಟರ್ಸ್ ಹೆಚ್ಚು ಕಡಿಮೆ ಆಗ್ತಾ ಇರುವುದರಿಂದ ಸದ್ಯ ಗಂಭೀರವಾಗಿದ್ದಾರೆ. ನಾವು ದೇವರಲ್ಲಿ ಪ್ರಾರ್ಥನೆ ಮಾಡಬೇಕು. ಶ್ರೀಗಳು ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾಸೋಹ ಹಾಗೂ ಶಿಕ್ಷಣ ಕೊಟ್ಟವರು.

      ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ 111 ವರ್ಷ ವಯಸ್ಸಿನ ಶಿವಕುಮಾರ ಶ್ರೀಗಳಿಗೆ ಕಳೆದ ತಿಂಗಳಷ್ಟೇ ಚೆನ್ನೈಯಲ್ಲಿ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಲಾಗಿದ್ದು, ಅವರು ಸದ್ಯಕ್ಕೆ ತುಮಕೂರಿನ ಮಠದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

      ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ಸಿದ್ದಗಂಗಾ ಮಠದ ಫೇಸ್ ಬುಕ್ ಪುಟದಲ್ಲಿ ಹೇಳಲಾಗಿದೆಯಾದರೂ, ಈಗಾಗಲೇ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಮುಂತಾದ ಗಣ್ಯರು ತಮ್ಮ ಪ್ರವಾಸವನ್ನು ಸ್ಥಗಿತಗೊಳಿಸಿಮಠಕ್ಕೆ ತೆರಳುತ್ತಿರುವುದು ಜನರಲ್ಲಿ ಆತಂಕ ಸೃಷ್ಟಿಯುಂಟು ಮಾಡಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap