ತುಮಕೂರು :
ಜಿಲ್ಲೆಯಲ್ಲಿ ಇಂದು 1 ಹೊಸ ಕರೋನಾ ವೈರಸ್ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ನಾಗೇಂದ್ರಪ್ಪ ನವರು ತಿಳಿಸಿದ್ದಾರೆ.
ಈ ವ್ಯಕ್ತಿಯು 33ವರ್ಷದ ಪುರುಷ , ಮುಂಬೈ ನಗರದ ಹೋಟೆಲೊಂದರಲ್ಲಿ ವೈಟರ್ ಆಗಿ ಕೆಲಸ ಮಾಡುತ್ತಿದ್ದರು. ಮೇ 24ರಂದು ಬೆಂಗಳೂರಿಗೆ ಹೋಗುವ ಮಾರ್ಗದಲ್ಲಿ ತುಮಕೂರಿನಲ್ಲಿ ಇಳಿದಿದ್ದರು, ಆ ದಿನ ಕರ್ಫ್ಯೂ ಇದ್ದುದ್ದರಿಂದ ಎಲ್ಲಿಯೂ ಹೋಗಲಾಗದೆ ತುಮಕೂರಿನ ಜಿಲ್ಲಾಸ್ಪತ್ರೆಗೆ ಬಂದಿದ್ದರು.
ಅವರ ಪ್ರಯಾಣದ ಇತಿಹಾಸ ಇದ್ದಿದ್ದರಿಂದ ತಕ್ಷಣವೇ ಗಂಟಲು ದ್ರವದ ಸ್ಯಾಂಪಲ್ ಪಡೆದು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ನಂತರ ಅವರನ್ನು ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳಲಾಗಿತ್ತು. ಇಂದು ಅವರ ವರದಿ ಬಂದಿದ್ದು ಸೋಂಕು ಇರುವುದು ದೃಡಪಟ್ಟಿದೆ.
ಮೈಸೂರಿನ ಸಮೀಪದ ಹಳ್ಳಿಯವರಾಗಿದ್ದ ಇವರನ್ನು P-2343 ಎಂದು ಗುರುತು ಮಾಡಲಾಗಿದೆ. ಇವರಿಗೆ ಜ್ವರ ಉಸಿರಾಟದ ತೊಂದರೆ ಸೇರಿದಂತೆ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ, ಪ್ರಸ್ತುತ ತುಮಕೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 27 ಜನರಿಗೆ ಸೋಂಕು ದೃಢಪಟ್ಟಿದ್ದು, ಇಂದು ಮತ್ತೊಂದು ಪ್ರಕರಣ ಸೇರ್ಪಡೆಯಾಗಿ 28 ಕ್ಕೆ ಏರಿಕೆಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ