ತುಮಕೂರು :
ಜಿಲ್ಲೆಯಲ್ಲಿ ಇಂದು 4 ಹೊಸ ಕರೋನಾ ವೈರಸ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ತೀವ್ರ ಆತಂಕ ಉಂಟುಮಾಡಿದೆ.
ಈ ಹಿಂದೆ ಜಿಲ್ಲೆಯಲ್ಲಿ 11 ಪ್ರಕರಣಗಳು ಪತ್ತೆಯಾಗಿದ್ದವು. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 15 ಪ್ರಕರಣಗಳು ಕಂಡುಬಂದಿವೆ.
ಸೋಂಕು ಕಾಣಿಸಿದ ನಗರದ ಪಿ.ಹೆಚ್.ಕಾಲೋನಿ ಹಾಗೂ ಹೌಸಿಂಗ್ ಬೋರ್ಡ್ ಪ್ರದೇಶ ಮತ್ತು ಶಿರಾ ನಗರದ ಒಂದು ಪ್ರದೇಶವನ್ನು ಸೀಲ್ಡೌನ್ ಮಾಡಲಾಗಿದೆ. ಆದರೆ, ಕೊರೊನಾ ತಡೆ ಕಾರ್ಯ ನಿರಂತರವಾಗಿ ಮುಂದುವರೆದಿದೆ.
ಜಿಲ್ಲೆಯಲ್ಲಿ ಈವರೆಗೆ 15 ಜನರಿಗೆ ಸೋಂಕು ದೃಢಪಟ್ಟಿದ್ದು, ಇವರಲ್ಲಿ ಇಬ್ಬರು ಮೃತಪಟ್ಟು, 5 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಉಳಿದ 8 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ