ತುಮಕೂರು :

ಜೆಲಿಟಿನ್ ಕಡ್ಡಿ ಸ್ಪೋಟಗೊಂಡು ಮನೆಯೊಂದು ಧ್ವಂಸಗೊಂಡಿರುವ ದುರ್ಘಟನೆ ಜಿಲ್ಲೆಯ ಮಸ್ಕಲ್ ಗ್ರಾಮದಲ್ಲಿ ನಡೆದಿದೆ.
ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮಿಕಾಂತ್ ಎಂಬುವರ ಮನೆಯಲ್ಲಿ ಈ ಸ್ಫೋಟ ನಡೆದಿದ್ದು, ಮನೆಯಲ್ಲಿದ್ದ ಸುವರ್ಣಮ್ಮ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕ್ರಷರ್ ಹಾಗೂ ಕಲ್ಲು ಬಂಡೆಗಳನ್ನು ಸ್ಪೋಟಿಸಲು ಬಳಸುವ ಜಿಲಿಟಿನ್ ಕಡ್ಡಿಗಳನ್ನು ಮನೆಯಲ್ಲಿ ಸಂಗ್ರಹಿಸಲಾಗಿತ್ತು, ಬಿಸಿಲಿನ ತಾಪಕ್ಕೆ ಜಿಲೆಟಿನ್ ಕಡ್ಡಿ ಸ್ಫೋಟಗೊಂಡಿದೆ.
ಶಿವಮೊಗ್ಗದ ಹುಣಸೋಡು ದುರಂತ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಸ್ಫೋಟದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.








