ತುಮಕೂರು:
ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ತುಮಕೂರು ಮೂಲದ ಉದ್ಯಮಿಯೊಬ್ಬರು ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದ 7 ಜೆಡಿಎಸ್ ಮುಖಂಡರು ನಾಪತ್ತೆಯಾಗಿದ್ದು, ಅವರಲ್ಲಿ ತುಮಕೂರಿನ ಎಲ್.ರಮೇಶ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ಈ ಹಿನ್ನೆಲೆಯಲ್ಲಿ ತುಮಕೂರಿನ ಸರಸ್ವತಿಪುರಂನಲ್ಲಿರುವ ರಮೇಶ್ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ. ಪತ್ನಿ ಮಂಜುಳ, ಮಕ್ಕಳಾದ ದಿಶಾ, ಶೋಭಿತ್ ಕಂಗಾಲಾಗಿದ್ದಾರೆ.
ರಮೇಶ್ ಅವರು ಲಿಕ್ಕರ್ ಬಿಸಿನೆಸ್ ಮಾಡುತ್ತಿದ್ದು, ಪ್ರವಾಸಕ್ಕೆಂದು ನೆಲಮಂಗಲದ ಗೆಳೆಯರ ಜೊತೆ ಶನಿವಾರ ಸಂಜೆ ಶ್ರೀಲಂಕಾಕ್ಕೆ ತೆರಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ