ತುಮಕೂರು : ನಡು ರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ!!

ತುಮಕೂರು: 

      ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಮಾರನಾಯಕನ ಹಳ್ಳಿ ಬಳಿ ನಡೆದಿದೆ.

      ಪಾಲನೇತ್ರಯ್ಯ(32) ಹತ್ಯೆಗೀಡಾದ ವ್ಯಕ್ತಿ. ಈತ ನಿನ್ನೆ(ಜ.29)ರ ರಾತ್ರಿ 10.30 ರ ವೇಳೆ ಮನೆಗೆ ಹಿಂದಿರುಗುವಾಗ ದುಷ್ಕರ್ಮಿಗಳು ತಲೆ ಭಾಗಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ.

      ಈ ಸಂಬಂಧ ಕ್ಯಾತ್ಸಂದ್ರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಎಸ್‌ಪಿ ಉದೇಶ್, ಡಿವೈಎಸ್ಪಿ ತಿಪ್ಪೇಸ್ವಾಮಿ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap