ತುಮಕೂರು :
ತುಮಕೂರಿನಲ್ಲಿ ರೌಡಿಗಳ ಅಟ್ಟಹಾಸ ಮುಂದುವರೆದಿದ್ದು ನಗರದ ಜನತೆಯನ್ನು ಬೆಚ್ಚಿಬೀಳಿಸುವ ಪ್ರಕರಣವೊಂದು ನಗರದ ಸಿರಾ ಗೇಟ್ ನ ನಾಗಣ್ಣನ ಪಾಳ್ಯದಲ್ಲಿ ನಡೆದಿದೆ.
ನಿನ್ನೆ ಗುರುವಾರ(ನ.7) ರ ಸಂಜೆ 4:30 ಕ್ಕೆ ಮಹಾಂತೇಶ್ ಹಾಗೂ ಮಂಜುನಾಥ್ ಎಂಬುವವರ ಮೇಲೆ ಭೀಕರ ಹಲ್ಲೆ ನಡೆದಿದೆ.
ಮಹಾಂತೇಶ್ ಮತ್ತು ಮಂಜುನಾಥ್ ಬೈಕ್ನಲ್ಲಿ ಅನಿಕೇತನ ಶಾಲೆ ಕಡೆಗೆ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ಅಡ್ಡ ಹಾಕಿದ ದಾಳಿಕೋರರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ದಾಳಿ ಮಾಡಿ ಎಸ್ಕೇಪ್ ಆಗಿದ್ದಾರೆ.
ಗಂಭೀರವಾಗಿ ಗಾಯಗೊಂಡು ರಕ್ತಸ್ರಾವದಿಂದ ಬಳಲುತ್ತಿದ್ದ ಮಹಾಂತೇಶನನ್ನ ಚಿಕಿತ್ಸೆಗಾಗಿ ಸಿದ್ಧಗಂಗಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮಹಾಂತೇಶ ಸಾವಿಗೀಡಾಗಿದ್ದಾನೆ.
ರೌಡಿಗಳ ಗುಂಪಿನ ನಂಟು ಮತ್ತು ವೈರತ್ವ ಈ ದಾಳಿಗೆ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೆಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾllವಂಶಿಕೃಷ್ಣ, ಎಎಸ್ಪಿ ಉದೇಶ್, ಡಿವೈಎಸ್ಪಿ ತಿಪ್ಪೇಸ್ವಾಮಿ, ಸಬ್ ಇನ್ ಸ್ಪೆಕ್ಟರ್ ವಿಜಯಲಕ್ಷ್ಮೀ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಬಗ್ಗೆ ತುಮಕೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಪ್ರಕರಣ ಮತ್ತೆ ತುಮಕೂರು ನಗರವನ್ನು ಭಯಬೀತರಾಗಿ ಮಾಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
