ತುಮಕೂರು:
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಶಸ್ತ್ರ ಚಿಕಿತ್ಸೆ ಮಾಡಿದಲ್ಲಿ ಸ್ವಲ್ಪ ನೋವಿದೆ ಹಾಗಾಗಿ ಜ್ವರ ಕಾಣಿಸಿಕೊಂಡಿತ್ತು ಎಂದು ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಮಾಹಿತಿ ನೀಡಿದ್ದಾರೆ.
ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಕಳೆದ 13 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಗಂಗಾ ಶ್ರೀಗಳು ಗುಣಮುಖರಾಗಿ ಬುಧವಾರ ಶ್ರೀಮಠಕ್ಕೆ ವಾಪಸ್ಸಾಗಿದ್ದರು.
ಶ್ರೀಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡಿದೆ. ಆದರೆ, ಶಸ್ತ್ರ ಚಿಕಿತ್ಸೆ ಮಾಡಿದಲ್ಲಿ ಸ್ವಲ್ಪ ನೋವಿದೆ ಹಾಗಾಗಿ ಜ್ವರ ಕಾಣಿಸಿಕೊಂಡಿತ್ತು. ಈಗ ಜ್ವರ ಕಡಿಮೆಯಾಗಿದ್ದು ಭಕ್ತಾಧಿಗಳು ಆತಂಕಪಡುವ ಅವಶ್ಯಕತೆ ಇಲ್ಲ. ಶ್ರೀಗಳಿಗೆ ಸ್ವಲ್ಪ ನಿಶ್ಯಕ್ತಿ ಇದ್ದು ಅದಕ್ಕೆ ಸಂಬಂಧಿಸಿದ ಔಷಧಿ ನೀಡಲಾಗುತ್ತಿದೆ. ಅಲ್ಲದೆ ಮಠದಲ್ಲಿಯೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಯಲಿದ್ದು ಬೇರೆ ಎಲ್ಲೂ ಶಿಫ್ಟ್ ಮಾಡಲಾಗುವುದಿಲ್ಲ. ಎಂದು ಕಿರಿಯ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ