ತುಮಕೂರು:
ತೀವ್ರ ಅನಾರೋಗ್ಯದಿಂದಾಗಿ ಬಳಲುತ್ತಿರುವ ಸಿದ್ದಗಂಗಾ ಶ್ರೀಗಳು ನಿನ್ನೆ(ಗುರುವಾರ) ಸ್ವತಃ ಅವರೇ ಸುಮಾರು ಒಂದೂವರೆ ಗಂಟೆಗಳ ಕಾಲ ಸ್ವಂತವಾಗಿ ಉಸಿರಾಟ ನಡೆಸಿದ್ದು, ಒಳ್ಳೆಯ ಸೂಚನೆ ಎಂದು ಹೇಳಲಾಗುತ್ತಿದೆ.
ವಿಶೇಷ ವೈದ್ಯರ ತಂಡದಿಂದ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ವಾಮೀಜಿಯವರಿಗೆ ಚಿಕಿತ್ಸೆ ನೀಡಲು ಅವರ ಅಚ್ಚುಮೆಚ್ಚಿನ ಶಿಷ್ಯ ಡಾ. ನಾಗಣ್ಣ ಅಮೆರಿಕಾದಿಂದ ರಜೆ ಹಾಕಿ ಬಂದಿದ್ದಾರೆ. ಚಿಕಿತ್ಸೆ , ನ್ಯೂಟ್ರಿಷಿಯನ್ ಮುಂದುವರೆಯುತ್ತಿದೆ. ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಚೇತರಿಕೆ ಕಂಡಿದೆ ಎಂದು ಡಾ.ಪರಮೇಶ್ ತಿಳಿಸಿದರು.
ಶ್ರೀಗಳ ಭೇಟಿಗಾಗಿ ರಾಷ್ಟ್ರಮಟ್ಟದ ನಾಯಕರು ಮಠಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ಸಮೀಪ 14 ಹೆಲಿಪ್ಯಾಡ್‌ಗಳ ನಿರ್ಮಾಣ ಕಾರ್ಯ ಭರದಿಂದ ನಡೆದಿದೆ. ಮಠಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವಂತೆಯೇ ಪೊಲೀಸ್ ಭದ್ರತೆಯನ್ನೂ ಹೆಚ್ಚಿಸಲಾಗಿದೆ. ಮಠದ ಸುತ್ತಲೂ ಬ್ಯಾರಿಕೇಡ್ ಹಾಕಲಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸುತ್ತೂರು ಶ್ರೀಗಳು ಇಂದು(ಶುಕ್ರವಾರ) ಮಠಕ್ಕೆ ಭೇಟಿ ನೀಡಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
