ತುಮಕೂರು :
ಲಿಂಗೈಕ್ಯರಾದ ಶತಾಯುಷಿ, ನಡೆದಾಡುವ ದೇವರು, ತ್ರಿವಿದ ದಾಸೋಹಿ ಶ್ರೀಶಿವಕುಮಾರ ಶ್ರೀಗಳ ಹೆಸರಿನಲ್ಲಿ ಸರ್ಕಾರದ ಕಾರ್ಯಕ್ರಮ ಘೋಷಣೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ತಿಳಿಸಿದ್ದಾರೆ.
ಅವರು ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಗೆ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಬಜೆಟ್‌ನಲ್ಲಿ ಶಿವಕುಮಾರ ಸ್ವಾಮಿ ಅವರ ಹೆಸರಿನಲ್ಲಿ ಏನಾದರೊಂದು ಕಾರ್ಯಕ್ರಮ ಘೋಷಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಶ್ರೀಗಳು ಲಿಂಗೈಕ್ಯರಾಗಿ 5 ದಿನಗಳು ಕಳೆದಿವೆ. ನಾಡಿನ ಇತಿಹಾಸದಲ್ಲಿ ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಬದುಕಿನಲ್ಲಿ ಇಂತಹ ಮತ್ತೊಬ್ಬ ಶ್ರೀಗಳನ್ನು ಕಾಣಲು ಸಾಧ್ಯವಿಲ್ಲ. ಮಠ, ಶಾರೀರಿಕವಾಗಿ, ಭೌತಿಕವಾಗಿ ಸಿದ್ದಗಂಗಾ ಶ್ರೀಗಳನ್ನು ಕಳೆದುಕೊಂಡರೂ ಅವರ ಆದರ್ಶಗಳು ಸಾರ್ವಕಾಲಿಕ. ಶ್ರೀ ಕ್ಷೇತ್ರವನ್ನು ಕಿರಿಯ ಶ್ರೀಗಳು ಹೆಚ್ಚಿನ ರೀತಿಯಲ್ಲಿ ಬೆಳೆಸಬೇಕಿದೆ ಎಂದರು.
ಶ್ರೀಗಳು ಅಂತಿಮ ದರ್ಶನಕ್ಕೆ ಬಂದಿದ್ದ ಲಕ್ಷಾಂತರ ಜನರಲ್ಲಿ ಕೆಲವರಿಗೆ ದರ್ಶನಕ್ಕೆ ಅವಕಾಶ ಸಿಗಲಿಲ್ಲ. ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಿದ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಧನ್ಯವಾದ ತಿಳಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
