ತುಮಕೂರು :
ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ನೋಡಲು ಬರುವ ಭಕ್ತಾದಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ.
ಶ್ರೀಗಳ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿರುವುದರಿಂದ ತುಮಕೂರಿಗೆ ಜನರ ದಂಡೇ ಆಗಮಿಸುತ್ತಿದೆ. ಅವರಿಗೆ ಅನುಕೂಲವಾಗುವಂತೆ ಜಿಲ್ಲಾಡಳಿತದಿಂದ ತುಮಕೂರಿನ ನಾನಾ ಕಡೆ ಉಚಿತ ಊಟದ ಕೇಂದ್ರವನ್ನು ಸ್ಥಾಪಿಸಲಾಗಿದೆ ಶಿವಕುಮಾರ ಸ್ವಾಮೀಜಿ ಸರ್ಕಲ್. ಟೌನ್ ಸರ್ಕಲ್. ಚರ್ಚ್ ಸರ್ಕಲ್.ಇನ್ನೂ ಹಲವು ಕಡೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾಕ್ಟರ್ ರಾಕೇಶ್ ಕುಮಾರ್ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
ಇನ್ನು ರಸ್ತೆ ಮಾರ್ಗ ಬದಲಾವಣೆ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕೃತ ಮಾಹಿತಿ ನೀಡುವವರೆಗೂ ಮಾಧ್ಯಮಗಳು ಸಹಕರಿಸಬೇಕು ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿರುವುದರಿಂದ ಗಣ್ಯರು ಮಠಕ್ಕೆ ಭೇಟಿ ನೀಡುತ್ತಿದ್ದು ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದೆ ಪೊಲೀಸ್ ಬಂದೋಬಸ್ತ್ ಗಾಗಿ ಜಿಲ್ಲೆಯ ಉಪ ವಿಭಾಗಗಳ ಸಿಬ್ಬಂದಿಗಳನ್ನು ಕರೆಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಿದ್ಧಗಂಗಾ ಮಠದ ಸುತ್ತಮುತ್ತ ಒದಗಿಸಲಾದ ಪೊಲೀಸ್ ಭಿಗಿಭದ್ರೆಯನ್ನು ಹೆಚ್ಚಿಸಲಾಗಿದ್ದು, ಭಾರಿ ಸಂಖ್ಯೆಯಲ್ಲಿ ಬ್ಯಾರಿಕೇಡ್ ಗಳನ್ನೂ ಅಳವಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ