ಬೆಂಗಳೂರು :
ತುಮಕೂರಿನ ಸಿದ್ಧಗಂಗಾಮಠದ ಶ್ರೀ ಸಿದ್ಧಲಿಂಗಸ್ವಾಮಿಗಳು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು.
‘ಕಾವೇರಿ’ ನಿವಾಸಕ್ಕೆ ಆಗಮಿಸಿದ ಶ್ರೀಗಳು, ಕಾವೇರಿ ನಿವಾಸದಲ್ಲಿರುವ ಗಿರ್ ತಳಿಯ ಹಸುವನ್ನು ವೀಕ್ಷಣೆ ಮಾಡಿದರು.
ಕೆಲವು ಹೊತ್ತು ಯಡಿಯೂರಪ್ಪ ಅವರ ಜೊತೆ ಸಿದ್ದಲಿಂಗ ಸ್ವಾಮೀಜಿ ಮಾತುಕತೆ ನಡೆಸಿದರು. ನಂತರ ಶ್ರೀಗಳಿಗೆ ಹಾರ ಹಾಕಿ, ಶಾಲು ಹೊದಿಸಿ ಯಡಿಯೂರಪ್ಪ ಆಶೀರ್ವಾದವನ್ನು ಪಡೆದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
