
10 ವರ್ಷಗಳ ಹಿಂದೆಯೇ ನಿರ್ಮಾಣವಾಗಿದ್ದ ಬರೋಬ್ಬರಿ 700 ಕೆಜಿ ತೂಕದ, 5.6 ಅಡಿ ಎತ್ತರ ಶ್ರೀಗಳ ಕಂಚಿನ ಪ್ರತಿಮೆಯನ್ನು ಇದೀಗ ಗೋಸಲ ಸಿದ್ದೇಶ್ವರ ವೇದಿಕೆಗೆ ತಂದು ಇರಿಸಲಾಗಿದ್ದು, ಪುಣ್ಯಾರಾಧನೆ ವೇಳೆ ಇಂದು ಲೋಕಾರ್ಪಣೆಗೊಳ್ಳಲಿದೆ.
ಶ್ರೀಗಳ ಕಂಚಿಮೆ ಪ್ರತಿಮೆ ಪ್ರತಿಷ್ಠಾಪನೆ ವಿಚಾರವಾಗಿ ಮೊನ್ನೆಯವರೆಗೂ ಗೊಂದಲ ಇತ್ತು. ಆದರೆ ಬುಧವಾರ ಎಲ್ಲಾ ಗೊಂದಲ ಪರಿಹಾರವಾಗಿದೆ. ಶ್ರೀ ಮಠದ ಪಾರ್ಕ್ ನ ಮಂಟಪದಲ್ಲಿ ಶ್ರೀಗಳ ಎತ್ತರಕ್ಕೆ ಸರಿ ಸಮನಾದ ಕಂಚಿನ ಪ್ರತಿಮೆಯನ್ನು ಪ್ರತಿಷ್ಠಾಪಿಸಲು ನಿರ್ಧಾರ ಮಾಡಲಾಗಿದೆ.

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಈ ಪ್ರತಿಮೆಯನ್ನು 10 ವರ್ಷಗಳ ಹಿಂದೆಯೇ ರೆಡಿ ಮಾಡಿಸಿದ್ದರು. ಆದರೆ ನಾನೇ ಇರಬೇಕಾದರೆ ಪ್ರತಿಮೆ ಯಾಕೆ ಅಂತ ಶಿವಕುಮಾರ ಸ್ವಾಮೀಜಿ ಕೋಪ ತೋರಿದ್ದರು. ಪ್ರತಿಮೆ ಸ್ಥಾಪಿಸಲು ಶ್ರೀಗಳು ವಿರೋಧ ವ್ಯಕ್ತಪಡಿಸಿದ್ದ ಕಾರಣದಿಂದ ಅದನ್ನು ಎಸ್‍ಐಟಿ ಕಾಲೇಜಿನ ಗೋಡಾನ್‍ನಲ್ಲಿ ಇರಿಸಲಾಗಿತ್ತು. ಇದೀಗ ಅದನ್ನು ಮಠಕ್ಕೆ ತರಲಾಗಿದೆ.
