ತುಮಕೂರು:
ಅಕ್ರಮ ಮರಳು ಫಿಲ್ಟರ್ ದಂಧೆಯಲ್ಲಿ ತೊಡಗಿದ್ದ ಅಡ್ಡೆ ಮೇಲೆ ತಡರಾತ್ರಿ ಅಧಿಕಾರಿಗಳು ದಾಳಿ ನಡೆಸಿದ್ದೇ ತಡ, ದಂಧೆಕೋರರು ಸ್ಥಳದಿಂದ ಕಾಲ್ಕಿತ್ತ ಘಟನೆ ನಗರದ ಮೇಳೆಕೋಟೆ ಗಂಗಸಂದ್ರದಲ್ಲಿ ನಡೆದಿದೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಮಹಾಂತೇಶಪ್ಪ ಮಾರ್ಗದರ್ಶನದಲ್ಲಿ ನವೀನ್ ನೇತೃತ್ವದ ತಂಡ ಮಧ್ಯರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ ಅಕ್ರಮ ಮರಳು ಫಿಲ್ಟರ್ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳನ್ನು ಕಂಡು ದಂಧೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿಯಾಗಿದ್ದಾರೆ.
ಮರಳು ಫಿಲ್ಟರ್ ಗೆ ಬಳಸುತ್ತಿದ್ದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದು, ಪ್ರಕರಣದ ದಾಖಲಿಸಿಕೊಳ್ಳಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ