ತುಮಕೂರು:
53 ವರ್ಷದ ಮಹಿಳೆಯೊಬ್ಬರು ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆ ನಗರದ ಸಿದ್ಧಗಂಗಾ ಆಸ್ಪತ್ರೆಯಲ್ಲಿ ನಡೆದಿದೆ.
ಕೃಷಿಕ ಕುಟುಂಬದವರಾಗಿರುವ ದಂಪತಿಗೆ 11 ವರ್ಷದ ಮಗನಿದ್ದು, ದಂಪತಿ ಮತ್ತೊಂದು ಮಗುವಿನ ಪ್ರಯತ್ನದಲ್ಲಿದ್ದರು. ಗರ್ಭಿಣಿಯಾಗಿದ್ದ ಮಹಿಳೆಗೆ ಸೋಮವಾರ ಸಿಸೇರಿಯನ್ ಮೂಲಕ ಹೆರಿಗೆಯಾಗಿದ್ದು ಅವಳಿ ಗಂಡು ಮಕ್ಕಳು ಜನಿಸಿವೆ.
ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದ್ದು ಅವರ ಪೋಷಕರು ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳು ಕೂಡ ಖುಷಿಯಲ್ಲಿದ್ದಾರೆ ಎಂದು ಆಸ್ಪತ್ರೆಯ ಸಿಇಒ ಡಾ. ಸಂಜೀವ್ ತಿಳಿಸಿದ್ದಾರೆ.
ಆಧುನಿಕ ಜೀವನ ಶೈಲಿಯಿಂದಾಗಿ ವಯಸ್ಸು ಮೀರಿದ ನಂತರ ಮಕ್ಕಳು ಆಗುವ ಸಾಧ್ಯತೆ ಕಡಿಮೆಯಾಗಿದೆ. 53 ವರ್ಷದ ಮಹಿಳೆ ಜನ್ಮ ನೀಡಿರುವುದು ಅಪರೂಪದ ಪ್ರಕರಣವಾಗಿದೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ