ಹೊಸಕೋಟೆ:
ಮನೆಗೆ ಲಾರಿ ನುಗ್ಗಿ ಛಾವಣಿ ಕುಸಿದ ಪರಿಣಾಮ ಇಬ್ಬರು ಮಲಗಿದ್ದಲ್ಲೇ ಮೃತಪಟ್ಟ ದಾರುಣ ಘಟನೆ ಹೊಸಕೋಟೆ ಸಮೀಪದ ಬೋಧನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಳಗಿನ ಜಾವ ಸಿಮೆಂಟ್ ಡಸ್ಟ್ ಸಾಗಿಸುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಗೆ ನುಗ್ಗಿದೆ. ಆ ಮನೆಯ ಮೇಲ್ಛಾವಣಿ ಕುಸಿದು ಮಲಗಿದ್ದ ರಘು(26) ಹಾಗೂ ಅವರ ಸಂಬಂಧಿಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸದ್ಯ ಲಾರಿಯನ್ನು ಕ್ರೇನ್ ಸಹಾಯದಿಂದ ತೆರವುಗೊಳಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ತಿರುಮಲ ಶೆಟ್ಟಿಹಳ್ಳಿ ಪೊಲೀಸರ ಭೇಟಿನೀಡಿದ್ದಾರೆ. ಅವಶೇಷಗಳಡಿಯಿಂದ ಇಬ್ಬರ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಹೇಳಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
