ಶಿವಮೊಗ್ಗ :
ಸಿಗಂದೂರು ದೇವಾಲಯದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿ ಬೆಳೆದು ಪರಸ್ಪರ ಹಲ್ಲೆ ನಡೆಸಿಕೊಂಡ ಘಟನೆ ನಡೆದಿದೆ.
ದೇವಸ್ಥಾನ ಆಡಳಿತ ಮಂಡಳಿಯ ಒಳ ಜಗಳ ಸ್ಫೋಟಗೊಂಡಿದ್ದು, ಸಿಗಂಧೂರು ಧರ್ಮದರ್ಶಿ ರಾಮಪ್ಪ ಬೆಂಬಲಿಗರ ಮೇಲೆ ಪ್ರಧಾನ ಅರ್ಚಕ ಶೇಷಗಿರಿ ಭಟ್ಟರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ದೇವಾಲಯಕ್ಕೆ ಪೂಜೆ ಮಾಡಿಸಲು ಬಂದಿದ್ದ ಭಕ್ತರ ಮೇಲೂ ಹಲ್ಲೆಯಾಗಿದೆ. ದೇವಾಲಯದ ಆಡಳಿತ ಕಚೇರಿಯ ಗ್ಲಾಸ್ಗಳು, ಪೀಠೋಪಕರಣ ಧ್ವಂಸ ಮಾಡಿದ್ದಾರೆ.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಪೊಲೀಸರು, ಹತೋಟಿಗೆ ತಂದಿದ್ದಾರೆ. ಪೊಲೀಸರ ಎದುರಲ್ಲೇ ಎರಡೂ ಬಣಗಳ ನಡುವೆ ಮಾತಿನ ಚಕಮಕಿ ಜೋರಾಗಿತ್ತು. ದೇವಾಲಯ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಅರ್ಚಕರು ಹಾಗೂ ಧರ್ಮದರ್ಶಿಗಳು ನಡುವೆ ಸುಮಾರು ದಿನಗಳಿಂದ ದೇಗುಲಕ್ಕೆ ಸಂಬಂಧಪಟ್ಟಂತೆ ಮುಸುಕಿನ ಗುದ್ದಾಟ ಇತ್ತು ಎನ್ನಲಾಗಿದ್ದು, ಅದು ಇಂದು ಜನತೆ ಮುಂದೆ ಬೀದಿಗೆ ಬಂದಿದೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ