ಚಿಕ್ಕಮಗಳೂರು :
ಸಿಎಂ ಬೆಂಗಾವಲು ಪಡೆ ವಾಹನ ಪಲ್ಟಿಯಾಗಿ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಜೇನುಗದ್ದೆ ಬಳಿ ನಡೆದಿದೆ.
ಗುರುವಾರ ಸಿಎಂ ಯಡಿಯೂರಪ್ಪ ಅವರು ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಸುವ ಸಲುವಾಗಿ ಮಂಗಳೂರಿಗೆ ಭೇಟಿ ನೀಡಿದ್ದರು. ಈ ಸಮಯದಲ್ಲಿ ಸಿಎಂ ಬೆಂಗಾವಲು ಕರ್ತವ್ಯದಲ್ಲಿದ್ದವರು ಇಂದು ಕಾರ್ಯ ಮುಗಿಸಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ.
ವಾಹನದ ಬ್ರೇಕ್ ಜಾಮ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ಬೆಂಗಾವಲು ವಾಹನದಲ್ಲಿದ್ದ ಇಬ್ಬರು ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಸಧ್ಯ ಗಾಯಾಳು ಸಿಬ್ಬಂದಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
