ಶಿವಮೊಗ್ಗ :
ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭದ್ರಾವತಿ ತಾಲೂಕು ಸಿದ್ದಾಪುರದ ಬಳಿ ನಡೆದಿದೆ.
ಮೃತರನ್ನು ರಾಜೇಶ್ (19), ತರುಣ್ (19) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಆರು ಜನ ಗಾಯಗೊಂಡಿದ್ದು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇವರೆಲ್ಲ ಬೆಂಗಳೂರಿನವರಾಗಿದ್ದು, ಗೋವಾ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸಾಗುವ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಭದ್ರಾವತಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
