ಬೆಂಗಳೂರು :
ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಗಾಗಿ ತೋಡಿದ್ದ ಗುಂಡಿಯಲ್ಲಿ ಬಿದ್ದು ಎರಡು ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ನಗರದ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿನೋದ್ ಕುಮಾರ್ ಮೃತಪಟ್ಟ ಮಗು. ಮೃತ ಮಗುವಿನ ತಂದೆ ಮೂಲತಃ ಕೊಪ್ಪಳ ತಾಲ್ಲೂಕಿನವರಾಗಿದ್ದು, ಬಿಜಿಎಸ್ ಆಸ್ಪತ್ರೆಯಲ್ಲಿ ಭದ್ರತಾ ಸಿಬ್ಬಂದಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ದಂಪತಿ, ನಿರ್ಮಾಣ ಹಂತದ ಕಟ್ಟಡ ಬಳಿಯ ಶೆಡ್‌ನಲ್ಲಿ ವಾಸವಾಗಿದ್ದರು ಎಂದು ತಿಳಿದು ಬಂದಿದೆ.
ಇಂದು ಬೆಳಗ್ಗೆ 8.30ರ ವೇಳೆಗೆ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ನ ಗುಂಡಿಗೆ ಬಿದ್ದ 2 ವರ್ಷದ ಮಗು ವಿನೋದ್ ತೀವ್ರವಾಗಿ ಗಾಯಗೊಂಡಿತ್ತು. ತಕ್ಷಣ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಸಾವನ್ನಪ್ಪಿದೆ.
ಪೋಷಕರು ಕೊಂಚ ಮೈಮರೆತಿದ್ದಕ್ಕೆ 2 ವರ್ಷದ ಮಗುವೊಂದು ಜೀವ ಕಳೆದುಕೊಂಡಿದೆ. ಘಟನೆಗೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
