ಜುಲೈವರೆಗೆ ಉಡುಪಿ ಕೃಷ್ಣನ ದರ್ಶನಕ್ಕೆ ಅವಕಾಶವಿಲ್ಲ!!

ಉಡುಪಿ:

     ಉಡುಪಿ ಕೃಷ್ಣನ ದರ್ಶನ ಸಿಗುವುದಕ್ಕೆ ಜುಲೈ ತನಕ ಕಾಯಬೇಕಾಗಿದೆ ಎಂದು ಅದಮಾರು ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

      ಸರ್ಕಾರ ಜೂನ್ 8(ಸೋಮವಾರ)ರ ನಂತರ ದೇವಸ್ಥಾನ ತೆರೆಯುವ ಅವಕಾಶ ಕೊಟ್ಟಿದೆ. ಆದರೆ,  ಕೃಷ್ಣಮಠದಲ್ಲಿ ಬಹಳ ಹಿಂದಿನಿಂದ ನಡೆದುಕೊಂಡ ಪರಂಪರೆ ಇದೆ. ಯತಿಗಳೇ ಪೂಜೆ ಮಾಡಿಕೊಂಡು ಬರುವ ಸಂಪ್ರದಾಯ ಇದೆ. ಯಾರಿಗೂ ಸಮಸ್ಯೆ ಆಗಬಾರದು. ಹೀಗಾಗಿ ಸೋಮವಾರ ನಾವು ದೇವಸ್ಥಾನವನ್ನು ತೆರೆಯುವುದಿಲ್ಲ ಎಂದು ಸ್ವಾಮೀಜಿ ಹೇಳಿದರು.

     ಈಗಲೇ ದರ್ಶನ ಆರಂಭಿಸಿದರೆ ಎಲ್ಲೆಡೆಯಿಂದ ಭಕ್ತರು ಬರುತ್ತಾರೆ. ಹೀಗಾಗಿ ನಮಗೆ ಭಕ್ತರ ಮತ್ತು ಕೃಷ್ಣ ಮಠದ ಸಿಬ್ಬಂದಿ ಆರೋಗ್ಯ ಮುಖ್ಯ. ನಾವು ಇನ್ನೂ 20 ರಿಂದ 30 ದಿನ ಕಾಯುತ್ತೇವೆ. ಮುಂದಿನ ಬೆಳವಣಿಗೆಗಳನ್ನು ನೋಡಿ ದರ್ಶನ ವ್ಯವಸ್ಥೆ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link
Powered by Social Snap