ಬೆಂಗಳೂರು:
ಉಗ್ರಪ್ಪ ಅವರು ತಮ್ಮ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು (ಶನಿವಾರ) ಪರಿಷತ್ ಸಭಾಪತಿಗಳಾದ ಬಸವರಾಜ್ ಹೊರಟ್ಟಿಯವರಿಗೆ ರಾಜಿನಾಮೆ ನೀಡಿದರು.
ಕಾಂಗ್ರೆಸ್ ನ ಹಿರಿಯ ನಾಯಕ ವಿ.ಎಸ್ ಉಗ್ರಪ್ಪ ಅವರು ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಸಂಸತ್ತಿಗೆ ಪ್ರವೇಶ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಅವರು ರಾಜೀನಾಮೆ ನೀಡಿದ್ದಾರೆ.
ಇತ್ತೀಚೆಗೆ ನಡೆದಿದ್ದ ಬಳ್ಳಾರಿ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ಭದ್ರಕೋಟೆಯನ್ನ ಕಾಂಗ್ರೆಸ್ ಛಿದ್ರಗೊಳಿಸಿದ್ದು, ವಿ.ಎಸ್ ಉಗ್ರಪ್ಪ ದಾಖಲೆ ಮತಗಳಿಂದ ಗೆಲುವಿನ ನಗೆ ಬೀರಿದ್ದಾರೆ.
ದಾಖಲೆಯ ಸುಮಾರು 2.5 ಲಕ್ಷ ಮತಗಳಿಂದ ಶ್ರೀರಾಮುಲು ಅವರ ಸಹೋದರಿ ಜೆ. ಶಾಂತ ಅವರನ್ನ ಮಣಿಸಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ