ಚಿಂಚೋಳಿ:
ನನ್ನ ಕಿರಿಯ ಮಗಳು ದ್ವಿತೀಯ ಪರೀಕ್ಷೆಯಲ್ಲಿ ಅನುತ್ತೀರ್ಣ ವಾಗಲೂ ಕಾಂಗ್ರೆಸ್ ಅವರೇ ಕಾರಣ ಎಂದು ಡಾ.ಉಮೇಶ್ ಜಾಧವ್ ಕೈ ನಾಯಕರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಚಿಂಚೋಳಿಯಲ್ಲಿ ಇಂದು ಪತ್ರಿಕಾಗೋಷ್ಟಿ ನಡೆಸಿ ಮತನಾಡಿದ ಅವರು, ರಾಜ್ಯ ಕಾಂಗ್ರೆಸ್ ನಾಯಕರು ಹಾಗೂ ಪ್ರಿಯಾಂಕ್ ಖರ್ಗೆ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ದ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷದ ನಾಯಕರು ನಾನು ಹಣ ತಗೆದುಕೊಂಡಿದ್ದೇನೆ ಎಂದು ನನ್ನ ವಿರುದ್ದ ವೈಯಕ್ತಿಕ ಆರೋಪಗಳನ್ನು ಮಾಡುತ್ತಿದ್ದಾರೆ. ನನ್ನ ಮಗಳು ಪಿಯುಸಿ ಪರೀಕ್ಷೆ ಬರೆಯಲು ಹೋದಾಗ ಶಿಕ್ಷಕರೊಬ್ಬರು, ಇವರ ಅಪ್ಪ ಮಾರಾಟವಾಗಿದ್ದಾನೆ ಎಂದು ಹೇಳಿದ್ದಾರೆ. ಇದರಿಂದ ನೊಂದ ಮಗಳು ಪರೀಕ್ಷೆ ಬರೆಯದೇ ಅಳುತ್ತಾ ಮನೆಗೆ ಬಂದು ಮಾತ್ರೆ ಸೇವಿಸಿ ಆತ್ಮಹತ್ಯೆಗೂ ಮುಂದಾಗಿದ್ದಳು. ಉತ್ತಮವಾಗಿ ಓದುತ್ತಿದ್ದ ಆಕೆ ಮಾನಸಿಕವಾಗಿ ಕುಗ್ಗಿದ್ದು ದ್ವಿತೀಯ ಪಿ ಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ. ಇದರಿಂದ ನನ್ನ ಕುಟುಂಬದ ಸದಸ್ಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಇದಕ್ಕೆಲ್ಲಾ ಕಾಂಗ್ರೆಸ್ ನಾಯಕರ ಆರೋಪವೇ ಕಾರಣ ಎಂದರು ಆರೋಪಿಸಿದರು.
ಕಾಂಗ್ರೆಸ್ನಲ್ಲಿದ್ದಾಗ ಎರಡು ಬಾರಿ ಶಾಸಕರಾಗಿದ್ದ ಜಾಧವ್, ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿಗೆ ಸೇರ್ಪಡನೆಗೊಂಡಿದ್ದರು. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ