
ಕಲಬುರಗಿಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಬಿಜೆಪಿಯಿಂದ ಉಮೇಶ್ ಜಾಧವ್ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,’ಇತ್ತೀಚೆಗಷ್ಟೇ ಬಿಜೆಪಿ ಸೇರಿದ ಉಮೇಶ್ ಜಾಧವ್ ಅವರನ್ನು ಕಲಬುರಗಿ ಕ್ಷೇತ್ರದಿಂದ ಕಣಕ್ಕಳಿಸುವ’ ನಿರ್ಧಾರವನ್ನು ಘೋಷಿಸಿದರು. ಈ ಸಂಬಂಧ ಬಿಜೆಪಿ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಸ್ವತಃ ಬಿಎಸ್ ಯಡಿಯೂರಪ್ಪ ಅವರೇ ಮುಂದೆ ನಿಂತು ಉಮೇಶ್ ಜಾಧವ್ ಅವರನ್ನ ಪಕ್ಷಕ್ಕೆ ಕರೆ ತಂದಿದ್ದಾರೆ. ಆದರೆ, ಉಮೇಶ್ ಜಾಧವ್ ಅವರ ರಾಜೀನಾಮೆಯನ್ನ ಸ್ಪೀಕರ್ ರಮೇಶ್ ಕುಮಾರ್ ಇನ್ನೂ ಅಂಗೀಕರಿಸಿಲ್ಲ. ಇನ್ನೊಂದೆಡೆ ಜಾಧವ್ ಮೇಲೆ ಅನರ್ಹತೆಯ ತೂಗುಗತ್ತಿ ನೇತಾಡುತ್ತಿದೆ. ಈ ಮಧ್ಯೆ ಸೋಲಿಲ್ಲದ ಸರದಾರ ಎಂದೇ ಪ್ರಸಿದ್ಧಿಗಳಿಸಿರುವ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಹೋರಾಡಲು ಉಮೇಶ್ ಜಾಧವ್ ನಿರ್ಧರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
