ಚಿತ್ರದುರ್ಗ :
ಶುಗರ್ ಲೋ ಆದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲು ಸಿದ್ಧತೆ ನಡೆಯುತ್ತಿದೆ.
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದಾಗ ಸದಾನಂದಗೌಡರ ಆರೋಗ್ಯದಲ್ಲಿ ಏರುಪೇರಾಗಿದೆ. ಚಿತ್ರದುರ್ಗದ ಹೋಟೆಲ್ ರೇಜೆನ್ಸಿಗೆ ಮಧ್ಯಾಹ್ನ ಊಟಕ್ಕೆ ಬಂದಿದ್ದ ಅವರು, ಕಾರಿನಿಂದ ಇಳಿಯುವಾಗ ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸವೇಶ್ವರ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ್ದು, ಆರೋಗ್ಯ ಸಹಜ ಸ್ಥಿತಿಗೆ ಬಂದಿದೆ. ಜ್ಯೂಸ್ ಕೂಡಾ ಕುಡಿದಿದ್ದಾರೆ. ಕುಟುಂಬದವರ ಜತೆಯೂ ಮಾತನಾಡಿದ್ದಾರೆ ಎಂದು ಶಾಸಕರಾದ ಜಿ.ಎಚ್. ತಿಪ್ಪಾರೆಡ್ಡಿ ಹಾಗೂ ಎಂ. ಚಂದ್ರಪ್ಪ ಮಾಹಿತಿ ನೀಡಿದ್ದಾರೆ.
ಜೀರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಹೆಬ್ಬಾಳ ರಸ್ತೆಯಲ್ಲಿರುವ ಹಾಸ್ಟರ್ ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆದಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ