ಪುಂಜಾಲಕಟ್ಟೆ:
ಅನಾರೋಗ್ಯ ದಿಂದ ಬಳಲುತ್ತಿದ್ದು ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೈದ ಘಟನೆ ಸೋಮವಾರ ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ.
ನೀಲಯ್ಯ ಶೆಟ್ಟಿಗಾರ್ (42) , ಕೇಸರಿ ( 39) ಮೃತಪಟ್ಟ ದುರ್ದೈವಿಗಳು. ಇಬ್ಬರೂ ಅನಾರೋಗ್ಯ ದಿಂದ ಬಳಲುತ್ತಿದ್ದು, ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಕೃತ್ಯ ಗೈದಿದ್ದಾರೆ.
ಮನೆಯಲ್ಲಿ ನೀಲಯ್ಯ ಅವರ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು, ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು. ನರಳಾಟದ ಶಬ್ದ ಕೇಳಿ ಬಂದಾಗ ಘಟನೆ ತಿಳಿದು ಬಂದಿತ್ತು.
ಬಳಿಕ ಸ್ಥಳೀಯರು ಸೇರಿ ಗಂಭೀರ ಗಾಯಗೊಂಡ ಇಬ್ಬರನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆ ಗೆ ಸಾಗಿ ಸುವಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದರು.
ಮಾಹಿತಿ ತಿಳಿದ ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ ಮತ್ತು ಸಿಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ