ಬಸ್‌ ಪಲ್ಟಿ : ಆಂಬುಲೆನ್ಸ್ ಇಲ್ಲದೆ ಆಟೋದಲ್ಲಿ ಗಾಯಾಳುಗಳ ರವಾನೆ!!!

ರಾಮನಗರ :

      ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯಗಳಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ.

      ರಾಮನಗರ ಹೊರವಲಯದಲ್ಲಿ ಮಧುರಾ ಗಾರ್ಮೆಂಟ್ಸ್ಗೆಸೇರಿದ ಬಸ್ ವೇಗವಾಗಿ ಚಲಿಸಿ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಬಸ್ ಪಲ್ಟಿಯಾಗಿದೆ. ಮಾಗಡಿ ರಸ್ತೆಯ ಅಕ್ಕೂರಿನಿಂದ ಬಸ್‌ ಬರುತ್ತಿದ್ದು, ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. 

      ಬಸ್‌ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.  ಹೆಚ್ಚಿನ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಸಂಬಂಧಿಕರನ್ನು ಕರೆದೊಯ್ಯಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಆ್ಯಂಬ್ಯುಲೆನ್ಸ್ ಕೊರತೆಯಿಂದಾಗಿ ಆಟೋದಲ್ಲಿ ಗಾಯಾಳಗಳನ್ನು ರವಾನಿಸಲಾಗಿದೆ. 

      ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap