ರಾಜ್ಯದಲ್ಲಿ ಈ ತಿಂಗಳು 1.50 ಕೋಟಿ ಲಸಿಕೆ ನೀಡುವ ಗುರಿ !!

ಕೋಲಾರ :

      ರಾಜ್ಯದಲ್ಲಿ ಸೆಪ್ಟೆಂಬರ್ ನಲ್ಲಿ ಕನಿಷ್ಠ 1.50 ಕೋಟಿ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

     ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರತಿ ಬುಧವಾರ ಕೋವಿಡ್ ಲಸಿಕಾ ಉತ್ಸವ ನಡೆಸುತ್ತಿದ್ದು, ಒಂದೇ ದಿನ 10 ಲಕ್ಷ ಲಸಿಕೆ ನೀಡುವ ಗುರಿ ಇಟ್ಟುಕೊಳ್ಳಲಾಗಿದೆ. ಸಾಮಾನ್ಯ ದಿನಗಳಲ್ಲಿ 5 ಲಕ್ಷ ಲಸಿಕೆ ನೀಡುವ ಗುರಿ ಇದೆ. ಒಂದು ತಿಂಗಳಲ್ಲಿ ಕನಿಷ್ಠ 1.50 ಕೋಟಿ ಡೋಸ್ ಲಸಿಕೆ ನೀಡುವ ಗುರಿ ಇದೆ. ಡಿಸೆಂಬರ್ ವೇಳೆಗೆ ಎಲ್ಲಾ ವಯಸ್ಕರಿಗೆ ಲಸಿಕೆ ನೀಡಬೇಕು ಎಂಬ ಉದ್ದೇಶವಿದೆ. ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದೇವೆ. ಗಡಿಭಾಗದ ಜಿಲ್ಲೆಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ. ಈ ಬಗ್ಗೆ ಕೇಂದ್ರದ ಆರೋಗ್ಯ ಸಚಿವರು ಕೂಡ ಸಲಹೆ ನೀಡಿದ್ದಾರೆ. ಗಡಿಭಾಗಗಳ ಜನರು ಸ್ವಯಂಪ್ರೇರಿತರಾಗಿ ಮುಂದೆ ಬಂದು ಲಸಿಕೆ ಪಡೆಯಬೇಕು ಎಂದು ಕೋರಿದರು. 

      ಆಗಸ್ಟ್ ನಲ್ಲಿ ರಾಜ್ಯಕ್ಕೆ 1.12 ಕೋಟಿ ಲಸಿಕೆ ಬಂದಿದೆ. ಒಂದೇ ತಿಂಗಳಲ್ಲಿ 1.10 ಕೋಟಿ ಲಸಿಕೆ ನೀಡಲಾಗಿದೆ. ಜನವರಿಯಿಂದ ಈವರೆಗೆ ಆಗಸ್ಟ್ ತಿಂಗಳಲ್ಲೇ ಅತ್ಯಧಿಕ ಲಸಿಕೆ ನೀಡಲಾಗಿದೆ. ಸೆಪ್ಟೆಂಬರ್ ನಲ್ಲಿ ಕನಿಷ್ಠ 1.50 ಕೋಟಿ ಲಸಿಕೆ ನೀಡುವ ಗುರಿ ಇದೆ. ಕೇರಳದಿಂದ ಬರುವವರಿಗೆ ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ ನಿಯಮ ತರಲಾಗಿದೆ. ಆದರೆ ಪ್ರತಿ ದಿನ ಬರುವ ವಿದ್ಯಾರ್ಥಿಗಳು ಸೇರಿದಂತೆ ಕೆಲವರಿಗೆ ಮಾರ್ಗಸೂಚಿಯಲ್ಲಿ ವಿನಾಯಿತಿ ನೀಡಲಾಗಿದೆ ಎಂದರು.

     ಲಸಿಕೆ ಪಡೆಯದವರಿಗೆ ರೇಷನ್, ಪಿಂಚಣಿ ತಡೆಹಿಡಿಯುವುದನ್ನು ಸರ್ಕಾರ ಒಪ್ಪುವುದಿಲ್ಲ. ಈ ರೀತಿ ನಿರ್ಧಾರವನ್ನು ಸರ್ಕಾರ ಎಲ್ಲೂ ಮಾಡಿಲ್ಲ. ಬೀದರ್, ಯಾದಗಿರಿ, ಕಲಬುರಗಿ ಮೊದಲಾದ ಜಿಲ್ಲೆಗಳಲ್ಲಿ ಜನರು ಕೋವಿಡ್ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಕೆಲವೆಡೆ ಚುನಾಯಿತ ಪ್ರತಿನಿಧಿ, ಸಂಘ, ಸಂಸ್ಥೆಗಳು ಲಸಿಕೆ ಪಡೆಯುವವರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡುತ್ತಿವೆ. ಜನರು ಲಸಿಕೆ ಹಾಕಿಸಿಕೊಳ್ಳಬೇಕೆಂಬುದು ಇದರ ಉದ್ದೇಶ. ಜಾಗೃತಿ ಮೂಡಿಸುವ ಭರದಲ್ಲಿ ಏನಾದರೂ ಆಗಿರಬಹುದು. ಈ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap