ಬೆಂಗಳೂರು :
ಸೆಪ್ಟೆಂಬರ್ 17 ರಂದು ರಾಜ್ಯದಲ್ಲಿ ಬೃಹತ್ ಕೊರೊನಾ ಲಸಿಕೆ ನೀಡುವ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಡಳಿತ ಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ಇಂದು ಸಂಜೆ 6 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿಗಳು ವಿಡಿಯೋ ಕಾನ್ಫರೆನ್ಸ್ ನಡೆಸುವರು. ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಕೋವಿಡ್ ನಿರ್ವಹಣಾ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸುವರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
