ನವದೆಹಲಿ:
2021ರ ಅಂತ್ಯದೊಳಗೆ ದೇಶದ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡಿದೆ.
ಕೊರೊನಾ ಲಸಿಕೆ ವಿತರಣೆ, ಲಸಿಕೆ ಕೊರತೆ, ಕೊರೊನಾ ಲಸಿಕೆ ದರ ಕುರಿತು ನ್ಯಾಯಾಲಯ ಪ್ರಶ್ನೆ ಮಾಡಿದ್ದು, ಜನರು ಕೊರೊನಾ ಲಸಿಕೆ ಪಡೆಯುವ ಮೊದಲು ಕೋವಿನ್ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ನೋಂದಾಯಿಸಿಕೊಳ್ಳುವುದು ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಪ್ರಕ್ರಿಯೆಗೆ ಅಡ್ಡಿಯಾಗುತ್ತದೆ, ಅಲ್ಲಿ ಇಂಟರ್‌ನೆಟ್ ಸಿಗುವುದು ಅಷ್ಟು ಸುಲಭವಲ್ಲ. ಪ್ರತಿಯೊಬ್ಬರೂ ಕೋವಿನ್ ಡಿಜಿಟಲ್ ವಿಭಜನೆಯಲ್ಲಿ ನೋಂದಾಯಿಸಿಕೊಳ್ಳಬೇಕು, ಗ್ರಾಮೀಣ ಪ್ರದೇಶದ ಜನರು ಕೋವಿನ್ ಅಪ್ಲಿಕೇಷನ್‌ನಲ್ಲಿ ನೋಂದಾಯಿಸಿಕೊಳ್ಳುವುದು ವಾಸ್ತವಿಕವಾಗಿ ಸಾಧ್ಯವೇ ಎಂದು ನ್ಯಾಯಾಲಯ ಕೇಳಿದೆ.
ಗ್ರಾಮಸ್ಥರು ಕಂಪ್ಯೂಟರ್ ಕೇಂದ್ರಗಳಿಗೆ ಹೋಗಿ ನೋಂದಾಯಿಸಿಕೊಳ್ಳಬಹುದು, ಮತ್ತು ಅವರಿಗೆ ಲಸಿಕೆ ನೀಡಲಾಗುವುದು ಎಂದು ಪ್ರತಿಕ್ರಿಯೆ ನೀಡಿದೆ. ಭಾರತದ ಲಸಿಕಾ ಕಾರ್ಯಕ್ರಮವು 2021ಕ್ಕಿಂತ ಮೊದಲು ಪೂರ್ಣಗೊಳ್ಳುತ್ತದೆ. ದೇಶದ ಎಲ್ಲರಿಗೂ ಕೋವಿಡ್ ಲಸಿಕೆ ನೀಡಲಾಗುವುದು. 2021ರ ಡಿಸೆಂಬರ್ ವೇಳೆ ಈ ಲಸಿಕಾ ಅಭಿಯಾನ ಪೂರ್ಣಗೊಳ್ಳಲಿದೆ.
ಜೂನ್ ತಿಂಗಳಿನಿಂದ ಲಸಿಕೆ ಉತ್ಪಾದನೆ ಪ್ರಮಾಣ ದುಪ್ಪಟ್ಟಾಗಲಿದೆ. ಬರುವ ಡಿಸೆಂಬರ್ ಅಂತ್ಯದ ವೇಳೆಗೆ ಲಸಿಕೆಯ ನೀಡಿಕೆ ಪೂರ್ಣಗೊಳಿಸಲಾಗುವುದು. ಇದಕ್ಕಾಗಿ ಯೋಜನೆ ರೂಪಿಸಲಾಗಿದ್ದು, 108 ಕೋಟಿ ಜನರಿಗೆ 2016 ಕೋಟಿ ಡೋಸ್ ಲಸಿಕೆ ನೀಡುವ ಯೋಜನೆ ಸಿದ್ಧವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
