ಮಂಗಳೂರು :
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಇಂದು ಇಬ್ಬರು ಮಹಿಳೆಯರು ಪ್ರವೇಶ ಮಾಡಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗೆಡೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಶಬರಿಮಲೆ ಸನ್ನಿಧಾನಕ್ಕೆ ಮಹಿಳೆಯರು ಪ್ರವೇಶಿಸಿದ್ದು, ಇದರಿಂದ ಒಳ್ಳೆದಾಯ್ತಲ್ಲ. ಹಠ ತೊಟ್ಟವರಿಗೆ ಸಮಾಧಾನ ಆಯ್ತಲ್ಲವೇ, ಕ್ಷೇತ್ರದ ಆಚಾರ, ಸಂಪ್ರದಾಯ ಪಾಲಿಸುವುದು ಮುಖ್ಯ ಬ್ರಹ್ಮಚರ್ಯ. ಶಬರಿ ಮಲೆಗೆ ಹೋಗುವವರು 48 ದಿನಗಳ ಕಾಲ ಬ್ರಹ್ಮಚರ್ಯ ಪಾಲಿಸಬೇಕು. ಸಂಯಮ ಸಾಧಿಸಿ ವ್ರತಾಚರಣೆ ಮಾಡಿ ಕ್ಷೇತ್ರಕ್ಕೆ ತೆರಳುತ್ತಾರೆ. ಈಗೆಲ್ಲ ಬೆಳಗ್ಗೆ ಮಾಲೆ ಹಾಕಿ ಮಧ್ಯಾಹ್ನ ಸನ್ನಿಧಾನಕ್ಕೆ ಹೋಗುವ ಆಚಾರವಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಮಹಿಳೆಯರಾದ ಬಿಂದು ಮತ್ತು ಕನಕ ಮಧ್ಯರಾತ್ರಿ ಬೆಟ್ಟವನ್ನು ಹತ್ತಿ ಬುಧವಾರ ಬೆಳಗ್ಗೆ 3.45ಕ್ಕೆ ದೇವಾಲಯವನ್ನು ಪ್ರವೇಶಿಸಿದ್ದರು. ಈ ಸಮಯದಲ್ಲಿ ಭಕ್ತರ ಸಂಖ್ಯೆ ಕಡಿಮೆ ಇತ್ತು ಮತ್ತು ಯಾವುದೇ ಮಾಧ್ಯಮಗಳು ಸಹ ಇರಲಿಲ್ಲ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
