ವಿಧಾನಪರಿಷತ್ ಸದಸ್ಯ ಪುಟ್ಟಣ್ಣಗೆ ಕೊರೋನಾ ದೃಢ!!

ಬೆಂಗಳೂರು :

      ವಿಧಾನಪರಿಷತ್ ಸದಸ್ಯ ಪುಟ್ಟಣ್ಣಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

      ಇದನ್ನು ಸ್ಪತಃ ಪುಟ್ಟಣ್ಣನವರೇ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ನಾಲ್ಕು ದಿನಗಳಿಂದ ಜ್ವರ ಇದ್ದುದರಿಂದ, ಕ್ವಾರಂಟೈನ್ ನಲ್ಲಿ ಇದ್ದೆ. ಗುರುವಾರ ಕೊವೀಡ್ ತಪಾಸಣೆಗೆ ಒಳಪಡಿಸಲಾಗಿತ್ತು. ತಪಾಸಣೆಯ ವರದಿ…

Posted by Puttanna Mlc on Saturday, July 4, 2020

      ‘ಕಳೆದ ನಾಲ್ಕು ದಿನಗಳಿಂದ ಜ್ವರ ಇತ್ತು. ಹಾಗಾಗಿ ಕ್ವಾರಂಟೈನ್​ನಲ್ಲಿ ಇದ್ದೆ. ಗುರುವಾರ ಕರೊನಾ ಪರೀಕ್ಷೆ ಮಾಡಿಸಿಕೊಂಡಿದ್ದೆ. ತಪಾಸಣೆಯ ವರದಿ ಪಾಸಿಟಿವ್ ಬಂದಿರುವುದರಿಂದ ನಿನ್ನೆಯೇ(ಶುಕ್ರವಾರ) ಕೋವಿಡ್​ ಆಸ್ಪತ್ರೆಗೆ ದಾಖಲಾಗಿದ್ದೇನೆ. ದೇವರ ದಯೆ ಹಾಗೂ ನಿಮ್ಮ ಆಶೀರ್ವಾದದಿಂದ ಬೇಗ ಗುಣಮುಖನಾಗಿ ಬರುತ್ತೇನೆ’ ಎಂದು ಹೇಳಿದ್ದಾರೆ.

     ಇತ್ತೀಚೆಗೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಕೂಡ ಕ್ವಾರೆಂಟೈನ್‌ನಲ್ಲಿ ಇದ್ದರು. ಆದರೆ ಕರ್ನಾಟಕದಲ್ಲಿ ಈವರೆಗೆ ಯಾವುದೇ ಜನಪ್ರತಿನಿಧಿಗೆ ಕೊರೊನಾ ಪಾಸಿಟಿವ್ ಬಂದಿರಲಿಲ್ಲ. ಈಗ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣಗೆ ಕೊರೊನಾ ಪಾಸಿಟಿವ್ ಬಂದಿರುವುದು ಮೊದಲ ಪ್ರಕರಣವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap