ಬೆಂಗಳೂರು:
ವಿಧಾನಮಂಡಲ ಹಾಗೂ ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಯನ್ನು ಏ.26ರಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶಿಸಿದ್ದಾರೆ.
ರಾಜ್ಯದಲ್ಲಿ ಎರಡನೇ ಅಲೆಯ ವೇಗ ಅಪಾರವಾಗಿದೆ. ದಿನವೊಂದಕ್ಕೆ 20 ಸಾವಿರಕ್ಕೂ ಅಧಿಕ ಕೊರೋನಾ ಪ್ರಕರಣಗಳು ದಾಖಲಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ಕುರಿತು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ(ಪ್ರ) ಎಂ.ಕೆ.ವಿಶಾಲಾಕ್ಷಿ ಪ್ರಕಟಣೆ ಹೊರಡಿಸಿದ್ದು, ಕೊರೋನಾ ನ 2ನೇ ಅಲೆಯು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸದಸ್ಯರುಗಳ ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ವಿಧಾನಮಂಡಲ, ವಿಧಾನಸಭೆಯ ಎಲ್ಲಾ ಸಮಿತಿಗಳ ಸಭೆಗಳನ್ನು ದಿನಾಂಕ 26-04-2021ರಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸಲು ಸಭಾಧ್ಯಕ್ಷರು ಆದೇಶಿಸಿರುತ್ತಾರೆಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ