ವಿಧಾನಸೌಧದ ಸುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ!!

ಬೆಂಗಳೂರು: 

     ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

     ಈ ಕುರಿತು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದು, ಇಂದಿನಿಂದ ಸೆ.23ರವರೆಗೆ ಅಧಿವೇಶನ ಮುಗಿಯುವವರೆಗೂ ಪ್ರತಿದಿನ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ. 

      ಅಧಿವೇಶನ ಹಿನ್ನೆಲೆಯಲ್ಲಿ ವಿವಿಧ ಸಂಘಟನೆ, ರಾಜಕೀಯ ಪಕ್ಷಗಳಿಂದ ವಿಧಾನಸೌಧಕ್ಕೆ ಮುತ್ತಿಗೆ, ಪ್ರತಿಭಟನೆ, ಮೆರವಣಿಗೆ, ಧರಣಿ ನಡೆಯುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ.ವಿಧಾನಸೌಧದ ಸುತ್ತ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap