ಬಳ್ಳಾರಿ :
ನೂತನ ವಿಜಯನಗರ ಜಿಲ್ಲೆ ವಿರೋಧಿಸಿ ಅಖಂಡ ಬಳ್ಳಾರಿ ಹೋರಾಟ ಸಮಿತಿಯಿಂದ ಇಂದು ಬಳ್ಳಾರಿ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿ ಭಟನೆ ತೀವ್ರ ಸ್ವರೂಪ ಪಡೆದಿದೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಳ್ಳಾರಿ ನಗರದ ಬಹುತೇಕ ಅಂಗಡಿ ಮುಗ್ಗಟ್ಟುಗಳು ಬಂದ್ ಆಗಲಿವೆ. ಸದ್ಯ ಈಗ ರಾಯಲ್ ವೃತ್ತದಲ್ಲಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಪ್ರತ್ಯೇಕ ವಿಜಯನಗರ ಜಿಲ್ಲೆ ರಚನೆ ವಿರೋಧಿಸಿ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿದ್ದ ಬಳ್ಳಾರಿ ಬಂದ್ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್, ಸಿಎಂ ಬಿ.ಎಸ್ ಯಡಿಯೂರಪ್ಪ ಭಾವಚಿತ್ರ ದಹನ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಬಂದ್ ಹಿನ್ನೆಲೆ ಬಿಗಿಬಂದೋಬಸ್ತ್ ಮಾಡಿಕೊಳ್ಳಲಾಗಿ ಬಳ್ಳಾರಿಯಲ್ಲಿ ಮೂವರು ಡಿವೈಎಸ್‌ಪಿ, 10 ಸಿಪಿಐ, 18 ಪಿಎಸ್‌ಐ, 40 ಎಎಸ್‌ಐ, 200 ಕಾನ್ಸ್‌ಟೇಬಲ್‌ಗಳು, 3 ಡಿಎಆರ್ ತುಕಡಿ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ