ಬೆಂಗಳೂರು :
‘ವಿಜಯನಗರ’ ವನ್ನು ರಾಜ್ಯದ 31ನೇ ಜಿಲ್ಲೆಯಾಗಿ ಘೋಷಿಸಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ಈ ಹಿಂದೆ ಬಳ್ಳಾರಿಯನ್ನು ವಿಭಜನೆ ಮಾಡಿ ಅಧಿಸೂಚನೆ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ವಿಜಯನಗರವನ್ನು ನೂತನ ಜಿಲ್ಲೆಯಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ.
ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ ಜಿಲ್ಲಾಕೇಂದ್ರವಾಗಿದ್ದು, ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹೂವಿನಹಡಗಲಿ, ಹರಪನಹಳ್ಳಿ ತಾಲೂಕುಗಳು ಈ ಜಿಲ್ಲೆಯ ವ್ಯಾಪ್ತಿಗೆ ಬರಲಿದೆ.
ಬಳ್ಳಾರಿ ಜಿಲ್ಲೆಯಲ್ಲಿ ಬಳ್ಳಾರಿ, ಕುರುಗೋಡು, ಸಿರಗುಪ್ಪ, ಕಂಪ್ಲಿ ಮತ್ತು ಸಂಡೂರು ತಾಲೂಕುಗಳಿರಲಿದೆ. ಬಳ್ಳಾರಿ ಜಿಲ್ಲಾ ಕೇಂದ್ರವಾಗಿ ಮುಂದುವರಿಯಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
