ವಿಜಯಪುರ :
ಇಂದು ನಡೆದ ಎಸ್‌ಎಸ್‌ಎಲ್‌ಸಿ ಗಣಿತ ಪ್ರಶ್ನೆ ಪತ್ರಿಕೆ ವಾಟ್ಸಪ್‌ನಲ್ಲಿ ಸೋರಿಕೆಯಾಗಿದೆ ಎಂದು ಡಿಡಿಪಿಐ ಖಚಿತಪಡಿಸಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಮೊರಟಗಿಯ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯಲ್ಲಿ ಪತ್ರಿಕೆ ಸೋರಿಕೆಯಾದ ಮಾಹಿತಿ ಅಧಿಕಾರಿಗಳಿಗೆ ತಲುಪಿದೆ.
ಮೊರಟಗಿ ಕಲ್ಪವೃಕ್ಷ ಶಿಕ್ಷಣ ಸಂಸ್ಥೆಯಲ್ಲಿ ಗಣಿತ ಪತ್ರಿಕೆ ಸೋರಿಕೆಯಾದ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಡಿಡಿಪಿಐ ಪ್ರಸನ್ನ ಪರಿಶೀಲನೆ ನಡೆಸಿದರು. ತಮ್ಮ ಬಳಿಯ ಪ್ರತಿ ಮತ್ತು ವಾಟ್ಸಪ್ ಪ್ರತಿಯೊಂದಿಗೆ ತುಲನೆ ಮಾಡಿದಾಗ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂಬುದನ್ನು ಪ್ರಸನ್ನ ತಿಳಿಸಿದ್ದಾರೆ. ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಿಂದ ಹೊರ ಬಂದಾಗ ಪ್ರಶ್ನೆ ಪತ್ರಿಕೆ ಸೋರಿಕೆಯ ವಿಷಯ ಗೊತ್ತಾಗಿದೆ.
ಸಿಂಧಗಿ ಪೊಲೀಸ್ ಠಾಣೆಗೆ ದೂರು ನೀಡುವ ಕುರಿತು ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ. ಈ ಸಂಬಂಧ ಸಿಂಧಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲು ಡಿಡಿಪಿಐ ಮುಂದಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ