ವಿಜಯಪುರ:
ಮಾಜಿ ಪ್ರಧಾನಿ, ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹಾಗೂ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರ ಕಂಚಿನ ಪ್ರತಿಮೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ನಾಶಮಾಡಲು ಯತ್ನಿಸಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದಿದೆ.
ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ನಿರ್ಮಿಸಿದ ಕಂಚಿನ ಪುತ್ಥಳಿಗೆ ಬುಧವಾರ ತಡರಾತ್ರಿ ಬೆಂಕಿ ಹಚ್ಚಿದ್ದಾರೆ. ಇದರಿಂದ ಕಂಚಿನ ಪುತ್ಥಳಿಗಳು ಕಪ್ಪಗಾಗಿವೆ.
ಗುತ್ತಿ ಬಸವಣ್ಣ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಕಾರಣರಾಗಿದ್ದ ಮಾಜಿ ಪ್ರಧಾನಿ ದೇವೇಗೌಡ ಹಾಗೂ ಎಂ.ಸಿ. ಮನಗೂಳಿ ಅವರ ಹೋರಾಟದ ಸವಿ ನೆನಪಿಗಾಗಿ ಅತೀ ಆತ್ಮೀಯತೆ ತೋರುವಂತೆ ಮನಗೂಳಿ ಹೆಗಲ ಮೇಲೆ ಕೈ ಹಾಕಿ ನಿಂತ ದೇವೇಗೌಡರ ಜೋಡಿ ಈ ಪುತ್ಥಳಿಗಳನ್ನು 2014 ಫೆಬ್ರವರಿ 12 ರಂದು ಇಂದಿನ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಉದ್ಘಾಟಿಸಿದ್ದರು.
ಸ್ಥಳೀಯ ರಾಜಕಾರಣದ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಗ್ರಾಮಸ್ಥರು ತಂಡೋಪ ತಂಡವಾಗಿ ಸಾಗುತ್ತಿದ್ದು, ಪೊಲೀಸ್ ಇಲಾಖೆ ಕೂಡ ತೆರಳಿ ತನಿಖೆ ಆರಂಭಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ