ವಿಜಯಪುರ:
ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧಗಿ ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ನಡೆದಿದೆ.
ಶಿವಯೋಗಿ ಬಿರಾದಾರ್(45) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ತನ್ನ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ ಎನ್ನಲಾಗಿದೆ.
5.29 ಎಕರೆ ಜಮೀನು ಹೊಂದಿರುವ ಇವರು ಕೃಷಿಗಾಗಿ ಗ್ರಾಮೀಣ ಬ್ಯಾಂಕಿನಲ್ಲಿ 2 ಲಕ್ಷ ರೂ. ಹಾಗೂ 5 ಲಕ್ಷ ರೂ. ಕೈಸಾಲ ಮಾಡಿದ್ದರೆನ್ನಲಾಗಿದೆ. ಆದರೆ ಮಳೆ ಇಲ್ಲದೆ ಬೆಳೆ ಕೈಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಾಲದ ಹೊರೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ.
ಈ ಸಂಬಂಧ ಸಿಂಧಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ