ಬೆಂಗಳೂರು:
ವಿಷ್ಣುವರ್ಧನ್ ಸ್ಮಾರಕ ವಿಚಾರ ದಿನೇ ದಿನೇ ತಾರಕಕ್ಕೇರುತ್ತಿರುವುದನ್ನು ಗಮನಿಸಿರುವ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಇಂದು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಷ್ ರಂತಹ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ನಾನು ಬದ್ಧನಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಬರೆದಿದ್ದಾರೆ.
ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಷ್ ರಂತಹ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ನಾನು ಬದ್ಧನಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ.
— CM of Karnataka (@CMofKarnataka) November 29, 2018
ಮುಂದಿನ ತಿಂಗಳ 30 ರಂದು ಸಾಹಸಸಿಂಹ ವಿಷ್ಣುವರ್ಧನ್ ಅವರ 9ನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ಕನಸಾಗೇ ಉಳಿದಿರುವ ವಿಷ್ಣು ಸ್ಮಾರಕದ ಕುರಿತು ಅಭಿಮಾನಿಗಳು ಧ್ವನಿಯೆತ್ತಿದ್ದಾರೆ. ಅಲ್ಲದೆ, ಸರ್ಕಾರ ಡಿಸೆಂಬರ್ 31ರ ಒಳಗೆ ವಿಷ್ಣು ಸ್ಮಾರಕ ವಿವಾದವನ್ನು ಬಗೆಹರಿಸಬೇಕು. ಅಲ್ಲಿಯೇ ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಕಡೆಗಣಿಸಿದರೆ, ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ” ಎಂದು ವಿಷ್ಣುವರ್ಧನ್ ಅಳಿಯ ಅನಿರುದ್ ಎಚ್ಚರಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ