ಬೆಂಗಳೂರು:
ಇತ್ತೀಚೆಗಿನ ರಾಜಕೀಯ ಬೆಳವಣಿಗೆಯಿಂದ ಬೇಸತ್ತಿದ್ದ ಎಚ್. ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಈ ಹಿಂದೆ ನಾನು ರಾಜೀನಾಮೆ ನೀಡಿದ ವೇಳೆಯಲ್ಲಿ ಪಕ್ಷದ ನಾಯಕರು ಸ್ವೀಕಾರ ಮಾಡಲಿಲ್ಲ ಎಂದು ಹೇಳಿದ್ದಾರೆ.
ಇತ್ತೀಚೆಗೆ ಮುಕ್ತಾಯವಾದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಉತ್ತಮ ಪ್ರದರ್ಶನ ತೋರಲು ವಿಫಲವಾದ ಹಿನ್ನೆಲೆಯಲ್ಲಿ, ಅದರ ನೈತಿಕ ಹೊಣೆಹೊತ್ತು ತಾವು ಈ ಹುದ್ದೆಯನ್ನು ತೊರೆಯುತ್ತಿರುವುದಾಗಿ ವಿಶ್ವನಾಥ್ ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕೆ.ಆರ್ ನಗರದಲ್ಲಿ ಕುರುಬ ಜನಾಂಗದ ವ್ಯಕ್ತಿಯೊಬ್ಬರಿಗೆ ಟಿಕೆಟ್ ನೀಡುವಂತೆ ಸಾ.ರಾ ಮಹೇಶ್ ಅವರಿಗೆ ಕೇಳಿಕೊಂಡಿದೆ. ಆದರೆ ಅವರು ಟಿಕೆಟ್ ನೀಡುವ ಬಗ್ಗೆ ಇಲ್ಲ ಅಂತ ಹೇಳಿದ್ದರು, ಇದು ನನಗೆ ತುಂಬಾ ಬೇಸರವಾಗಿತ್ತು ಅಂತ ಮಾಧ್ಯಮಗಳ ಮುಂದೆ ಬೇಸರ ವ್ಯಕ್ತಪಡಿಸಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
