ಬೆಂಗಳೂರು:
ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ(ವಿಟಿಯು) ವನ್ನು ವಿಭಜಿಸಿ ಹಾಸನದಲ್ಲಿ ಪ್ರತ್ಯೇಕ ತಾಂತ್ರಿಕ ವಿಶ್ವವಿದ್ಯಾಲಯವನ್ನು ಪ್ರಾರಂಭಿಸುವ ಪ್ರಸ್ತಾವನೆ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟ ಪಡಿಸಿದ್ದಾರೆ.
ನಿನ್ನೆ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ವಿಟಿಯು ವಿಭಜನೆ ವಿಚಾರದಲ್ಲಿ ತಮ್ಮ ಹೇಳಿಕೆ ಕುರಿತು ತಪ್ಪಾಗಿ ಗ್ರಹಿಸಲಾಗಿದೆ. ಹಾಸನವನ್ನು ಅತ್ಯುತ್ತಮ ಶೈಕ್ಷಣಿಕ ಕೇಂದ್ರವಾಗಿ ಅಭಿವೃದ್ಧಿ ಪಡಿಸಲಾಗುವುದು. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವಿಭಜನೆ ಪ್ರಸ್ತಾವನೆ ಸದ್ಯಕ್ಕೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ