ಮನೆಯ ಗೋಡೆ ಕುಸಿತ : ತಾಯಿ-ಮಗನ ಸಾವು!!

ಚನ್ನಗಿರಿ:

       ರಾತ್ರಿ ವೇಳೆ ನಿದ್ರಿಸುತ್ತಿದ್ದಾಗ ಮಳೆಯಿಂದ ಶಿಥಿಲಗೊಂಡಿದ್ದ ಗೋಡೆ ಕುಸಿದ ಪರಿಣಾಮ 30 ವರ್ಷದ ತಾಯಿ ಹಾಗೂ 1 ವರ್ಷದ ಮಗ ಸಾವನ್ನಪ್ಪಿರುವ ದಾರುಣ ಘಟನೆ ಚನ್ನಗಿರಿ ತಾಲೂಕಿನ ಹೊದಿಗೆರೆ ಗ್ರಾಮದಲ್ಲಿ ನಡೆದಿದೆ. 

      ತಾಯಿ ಉಮಾ ಮತ್ತು ಅವರ ಮಗ ಧನುಷ್ ಮೃತ ದುರ್ದೈವಿಗಳು. ಇಂದು ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಮಗುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

     ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap