ಬೆಂಗಳೂರು:
ಚುನಾವಣೆ ಮಾದರಿ ನೀತಿ ಸಂಹಿಂತೆ ಉಲ್ಲಂಘನೆ ಆರೋಪ ಸಂಬಂಧ ವಿಚಾರಣೆಗೆ ಹಲವು ಬಾರಿ ಗೈರು ಹಾಜರಿ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ಹಾಗೂ ಹಾಲಿ ಶಾಸಕ ರೇಣುಕಾಚಾರ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದೆ.
ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರೂ ಮಾಜಿ ಸಚಿವ ರೇಣುಕಾಚಾರ್ಯ ಗೈರು ಹಿನ್ನೆಲೆಯಲ್ಲಿ ನ್ಯಾ. ರಾಮಚಂದ್ರ ಡಿ. ಹುದ್ದರ್ ಎರಡನೇ ಬಾರಿ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ