ಬೆಂಗಳೂರು:
ನಿರ್ಮಾಣ ಹಂತದ ವಾಟರ್ ಟ್ಯಾಂಕ್ ಕುಸಿದು ಮೂವರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾನ ನಗರದ ಜೋಗಪ್ಪ ಲೇಔಟ್ ಬಳಿ ನಡೆದಿದೆ.
ನಗರದ ಲುಂಬಿನಿ ಗಾರ್ಡನ್ ಬಳಿಯ ಜೋಗಪ್ಪ ಲೇಔಟ್ ಬಳಿ BWSSB ವಾಟರ್ ಟ್ಯಾಂಕ್ ಕಾಮಗಾರಿ ಪ್ರಗತಿಯಲ್ಲಿದ್ದು, ಈ ವೇಳೆ ನಿರ್ಮಾಣ ಹಂತದ ಟ್ಯಾಂಕ್ ಕುಸಿತ ಉಂಟಾಗಿ, ಮೂವರು ಸಾವನ್ನಪ್ಪಿ ಆರು ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿದ ತಕ್ಷಣ ಪೊಲೀಸ್ ಹಾಗು ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಅವಶೇಷಗಳಡಿ ಸಿಲುಕಿದ್ದ 25 ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಸಿದ್ದಾರೆ. ರಕ್ಷಣಾ ಕಾರ್ಯ ನಡೆಯುತ್ತಿದೆ.
ಕಟ್ಟಡ ನಿರ್ಮಾಣದ ವೇಳೆ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳನ್ನು ವಹಿಸದ ಹಿನ್ನಲೆಯಲ್ಲಿ ದಿನದಿಂದ ದಿನಕ್ಕೆ ಕಟ್ಟಡ ಕುಸಿತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಆರೋಪಿಸಲಾಗುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ