ಲಿಂಗನಮಕ್ಕಿಯಿಂದ ಬೆಂಗಳೂರಿಗೆ ನೀರು ತರಲು ಮಾರ್ಗ ಪರಿಶೀಲನೆ!!!

ಬೆಂಗಳೂರು:

     ಲಿಂಗನಮಕ್ಕಿ ಜಲಾಶಯದಿಂದ ಬೆಂಗಳೂರಿಗೆ ನೀರು ತರಲು ಮಾರ್ಗ ಪರಿಶೀಲನೆ ಮಾಡಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.

     ಡಾ.ಬಾಬು ಜಗಜೀವನ್‌ರಾಮ್ ಅವರ 33 ನೇ ಪುಣ್ಯ ಸ್ಮರಣೆ ದಿನದಂದು ವಿಧಾನಸೌಧದ ಎದುರು ಅವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ ಕೇವಲ 80 ಅಡಿ ನೀರಿದ್ದು, ಒಂದು ತಿಂಗಳ ಅವಧಿಗೆ ಮಾತ್ರ ಬೆಂಗಳೂರಿಗೆ ನೀರು ಹರಿಸಲು ಸಾಧ್ಯ. ಮಳೆ ಬಾರದೆ, ಒಳಹರಿವು ಹೆಚ್ಚಾಗದೇ ಬೆಂಗಳೂರಿಗೆ ನೀರು ಸಿಗುವುದೇ ಕಷ್ಟವಾಗಿದೆ. ಲಿಂಗನಮಕ್ಕಿಂದ ನೀರು ತರಿಸಲು ಡಿಪಿಆರ್‌ ಮಾಡಿಸಲಾಗುತ್ತಿದೆ . ಶಿವಮೊಗ್ಗ, ಚಿತ್ರದುರ್ಗ, ವಾಣಿವಿಲಾಸದಿಂದ ಬೆಂಗಳೂರಿಗೆ ನೀರು ತರಲು ಮಾರ್ಗ ಗುರುತಿಸಲಾಗಿದೆ ಎಂದರು.

      ಡಾ. ಬಾಬು ಜಗಜೀವನ್‌ ರಾಮ್‌ ಅವರ ಹಸಿರು ಕ್ರಾಂತಿ ಮೂಲಕ ನಮ್ಮ ದೇಶ ಆಹಾರ ಧಾನ್ಯ ಉತ್ಪಾದನೆಯಲ್ಲಿ ಸ್ವಾವಲಂಬಿಗಳನ್ನಾಗಿ ಮಾಡಿದ್ದಾರೆ. ಜವಹಾರ್‌ಲಾಲ್‌ ನೆಹರು ಅವರ ಸಂಪುಟದಲ್ಲಿ ಅತಿ ಕಿರಿಯ ವಯಸ್ಸಿನ ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರು ಕೃಷಿ ಹಾಗೂ ರಕ್ಷಣಾ ಸಚಿವರಾಗಿದ್ದ ವೇಳೆ ಸಾಕಷ್ಟು ಕೆಲಸ ಮಾಡಿದ್ದಾರೆ. ಕೃಷಿ ಕ಼್ಷೇತ್ರದಲ್ಲಿ ಅತಿದೊಡ್ಡ ಬದಲಾವಣೆ ತಂದು, ಹಸಿರು ಕ್ರಾಂತಿಗೆ ಕಾರಣರಾದವರು. ನಮ್ಮ ದೇಶ ಆಹಾರಧಾನ್ಯದಲ್ಲಿ ಸ್ವಾವಲಂಬಿಯಾಗಿದೆ. ಇದಕ್ಕೆ ಇವರು ಹಾಕಿಕೊಟ್ಟ ನೀತಿಗಳೇ ಕಾರಣ ಎಂದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap