ಯಾವುದೇ ಸಂದರ್ಭದಲ್ಲೂ ನಾವು ಯುದ್ಧಕ್ಕೆ ಸಿದ್ಧ!!

ಬೆಂಗಳೂರು:

       ಯಾವುದೇ ಸಂದರ್ಭದಲ್ಲೂ ನಾವು ಯುದ್ಧಕ್ಕೆ ಸಿದ್ಧರಿದ್ದೇವೆ ಎಂದು ಹೇಳುವ ಮೂಲಕ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​ ನೆರೆ ರಾಷ್ಟ್ರ ಪಾಕಿಸ್ತಾನಕ್ಕೆ ಖಡಕ್​ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

      ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ ಆರಂಭಗೊಂಡಿರುವ ಏರೋ ಇಂಡಿಯಾ 2019ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಿಆರ್‌ಪಿಎಫ್ ಯೋಧರ ಮೇಲಿನ ಉಗ್ರರ ದಾಳಿಯಿಂದ ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ, ದಾಳಿ ನಡೆದ ದಿನವೇ ಯೋಧರು ಪ್ರತಿದಾಳಿಗೆ ಸಿದ್ಧರಿದ್ದರು ಎಂದಿದ್ದಾರೆ.

      ಅಲ್ಲದೇ, ಈಗಲೂ ನಮ್ಮ ಯೋಧರು ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ಕೂಡ ಸಿದ್ಧರಿದ್ದು, ಕಾಶ್ಮೀರಿ ಮೂಲದ ಅಧಿಕಾರಿಗಳ ಜೊತೆ ಗೃಹಸಚಿವರು ಸಂಪರ್ಕದಲ್ಲಿದ್ದಾರೆ ಎಂದು ಹೇಳಿದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ