ಬೆಂಗಳೂರು:
ಪೊಲೀಸರ ಅನುಮತಿ ಇಲ್ಲದೆಯೂ ಕಾಂಗ್ರೆಸ್ ನಾಯಕರು ಒಗ್ಗೂಡಿ ಸೈಕಲ್ ಜಾಥಾ ನಡೆಸಿ ಪ್ರತಿಭಟನೆ ನಡೆಸಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸುವುದು ಖಚಿತ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಭಾಗವಹಿಸಲು
ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ @siddaramaiah ಅವರು ತಮ್ಮ ನಿವಾಸದಿಂದ ಕೆಪಿಸಿಸಿ ಕಚೇರಿ ವರೆಗೆ ಸೈಕಲ್ ರ್ಯಾಲಿ ನಡೆಸಿದರು.#SpeakUpAgainstFuelHike pic.twitter.com/CcWZjLIHgz— Karnataka Congress (@INCKarnataka) June 29, 2020
ದೇಶದಲ್ಲಿ ಪೆಟ್ರೋಲ್-ಡೀಸಲ್ ಬೆಲೆ ಏರಿಕೆ ಖಂಡಿಸಿ ಇಂದು ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಇದು ಕಾನೂನು ಉಲ್ಲಂಘನೆ ಆಗಿದ್ದು, ಕೊರೊನಾ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಹೀಗಿದ್ದರೂ ಪ್ರತಿಭಟನೆ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಎಫ್‌ಐಆರ್ ದಾಖಲಾಗುವುದು ಖಚಿತ ಎಂದು ಸಚಿವರು ತಿಳಿಸಿದ್ದಾರೆ.
ಇದೇ ವಿಚಾರವಾಗಿ ನಗರ ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಪ್ರತಿಕ್ರಿಯಿಸಿ, ಪ್ರತಿಭಟನೆಗೆ ಅನುಮತಿ ಇಲ್ಲ ಎಂದು ಹೈಗ್ರೌಂಡ್ಸ್ ಪೋಲಿಸರು ತಿಳಿಸಿದ್ದರೂ, ನಿಯಮವನ್ನು ಉಲ್ಲಂಘಿಸಿ ಪ್ರತಿಭಟನೆ ಕೈಗೆತ್ತಿಕೊಂಡ ಕಾಂಗ್ರೆಸ್ ನಾಯಕರ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಲಿದ್ದಾರೆ ಎಂದು ರಾಥೋಡ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ