ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ!!!

ಬೆಂಗಳೂರು : 

     ಗಡಿ ಜಿಲ್ಲೆಗಳಲ್ಲಿಯೇ ಕೊರೊನಾ ಸೋಂಕು ಕಟ್ಟಿಹಾಕಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಇಂದು ರಾತ್ರಿಯಿಂದಲೇ ರಾಜ್ಯದ 8 ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೆ ಬರಲಿದೆ.

    ಗಡಿ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು ಹಾಗೂ ಬೆಳಗಾವಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. 

     ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೊರೊನಾ ಸೋಂಕು ಮಿತಿ ಮೀರಿದ್ದು, ಈ ನಡುವೆ ರಾಜ್ಯದಲ್ಲಿಯೂ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಯಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap